ಬಾಲಕಿಯರಿಬ್ಬರಿಗೆ ಇನ್ಸ್ಟಾಗ್ರಾಮ್‌ ನಿಂದ ಪರಿಚಯವಾದ ಕೇರಳ ಮೂಲದ ಹುಡುಗನಿಂದ ಲೈಂಗಿಕ ದೌರ್ಜನ್ಯ..! ಯುವಕನ ಬಂಧನ

Share with

ವಿಟ್ಲ: ಬಾಲಕಿಯರಿಬ್ಬರಿಗೆ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಯುವಕನೊಬ್ಬನನ್ನು ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಯುವಕನೊಬ್ಬನನ್ನು ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಸಾಲೆತ್ತೂರು ಮೂಲದ ಬಾಲಕಿಗೆ ಇನ್ಸ್ಟಾಗ್ರಾಮ್ ಮೂಲಕ ಹುಡುಗಿಯ ಹೆಸರಿನಲ್ಲಿ ಕೇರಳ ಮೂಲದ ಯುವಕನ ಪರಿಚಯವಾಗಿತ್ತು, ನಂತರ ಆತ್ಮೀಯತೆ ಬೆಳೆದು ದೈಹಿಕ ಸಂಬಂಧದ ಹಂತಕ್ಕೆ ತಲುಪಿದೆ. ಇದೇ ರೀತಿಯಲ್ಲಿ ಪಕ್ಕದ ಮನೆಯ ಬಾಲಕಿಗೂ ವ್ಯಕ್ತಿಯ ಪರಿಚಯವಾಗಿದ್ದು ಇಬ್ಬರು ಬಾಲಕಿಯರು ಈ ವಿಷಯವನ್ನು ಹಂಚಿಕೊಂಡಾಗ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಯುವಕ ಒಬ್ಬನೇ ಎಂಬುದು ತಿಳಿದು ಬಂದಿದೆ.

ಇಬ್ಬರ ಜತೆಗೂ ದೈಹಿಕ ಸಂಪರ್ಕ ನಡೆಸಿದ ಯುವಕನ ವಿರುದ್ಧ ಕೆಲವು ದಿನಗಳ ಹಿಂದೆ ಬಾಲಕಿಯ ಮನೆಯವರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಾಲಕಿಯರಿಗೆ ದೌರ್ಜನ್ಯ ಎಸಗಿದ್ದರಿಂದ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ, ಚೈಲ್ಡ್ ಕೇರ್ ಸಂಸ್ಥೆಯವರು ತನಿಖೆ ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *