ಬೈಂದೂರು: ಮೀನುಗಾರಿಕೆಗೆ ತೆರಳಿದ ದೋಣಿ ಮಗುಚಿ ಇಬ್ಬರ ಸಾವು!

Share with

ಬೈಂದೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.

ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.

ಮೃತರನ್ನು ಹಡವಿನಕೋಣೆ ಶಿರೂರಿನ ಅಬ್ಸುಲ್ ಸತ್ತರ್ (45) ಹಾಗೂ ಭಟ್ಕಳ ನಿವಾಸಿ ಮಿಸ್ಬಾ ಯೂಸುಫ್ (48) ಎನ್ನಲಾಗಿದೆ.

ಭಾನುವಾರ ರಾತ್ರಿ 10 ಗಂಟೆಗೆ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ್ದ ನುಮೈರಾ ಅಂಜುಮ್ ಎಂಬ ದೋಣಿಯಲ್ಲಿ 3 ಜನರು ತೆರಳಿದ್ದು, ಸೋಮವಾರ ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಮುಂಜಾನೆ ಸುಮಾರು 1.30 ಗಂಟೆ ವೇಳೆಗೆ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ಅವಘಡ ಸಂಭವಿಸಿದೆ.

ಈ ಅವಘಡದಲ್ಲಿ ಇಬ್ಬರು ಮೃತಪಟ್ಟು, ದೋಣಿಯಲ್ಲಿದ್ದ ಮತ್ತೋರ್ವ ಬುಡ್ಡು ಮುಖ್ತಾರ್ (37) ಹಡವಿನಕೋಣೆ ಎಂಬುವವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಸು ಯಾಕೂಬ್ ಎಂಬವರು ರಕ್ಷಣೆ ಮಾಡಿದ್ದಾರೆ.

ಕರಾವಳಿ ಕಾವಲು ಪಡೆ ಹಾಗೂ ಆರಕ್ಷಕ ಸಿಬ್ಬಂದಿಗಳು ಆಗಮಿಸಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *