ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮವಾಗಿ ಗಡಿ ದಾಟುತ್ತಿದ್ದ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ.
ಇಂದು ಮುಂಜಾನೆ ಪೂಂಚ್ ಸೆಕ್ಟರ್ನಲ್ಲಿ ನಿಯಂತ್ರಣ ರೇಖೆಯನ್ನು ದಾಟಲು ಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.