ದೇಶದ ಒಳನುಸುಳಳು ಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರ ಹತ್ಯೆ

Share with

ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ.

ಶ್ರೀನಗರ: ದೇಶದ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ.

“ಕುಪ್ವಾರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಮಚಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಒಳನುಸುಳುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ” ಎಂದು ಕುಪ್ವಾರ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಎರಡು ಎಕೆ ರೈಫಲ್‌ಗಳು, ನಾಲ್ಕು ಎಕೆ ಮ್ಯಾಗಜೀನ್‌ಗಳು, ಒಂದು ಪಾಕಿಸ್ತಾನಿ ಪಿಸ್ತೂಲ್, ಒಂದು ಪೌಚ್ ಮತ್ತು 2,100 ರೂಪಾಯಿ ಪಾಕಿಸ್ತಾನದ ಕರೆನ್ಸಿಯನ್ನು ಎನ್‌ಕೌಂಟರ್ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.


Share with

Leave a Reply

Your email address will not be published. Required fields are marked *