ಟಿಪ್ಪರ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಸಾವು

Share with

ಬ್ರಹ್ಮಾವರ : ಭೀಕರ ಅಪಘಾತದಲ್ಲಿ ಮಹಿಳೆಯೊರ್ವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮಾಬುಕಳ ಸೇತುವೆ ಸಮೀಪ ನಡೆದಿದೆ.

ಮೃತರನ್ನು ಮಮ್ತಾಜ್‌ (44) ಎಂದು ಗುರುತಿಸಲಾಗಿದೆ.

ಗುರುವಾರ ಸಂಜೆ ಮಾಬುಕಳ ಸೇತುವೆ ಸಮೀಪ ಸ್ಕೂಟರ್ ಮತ್ತು ಟಿಪ್ಪ‌ರ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸಹ ಸವಾರೆ ಬಾರ್ಕೂರು ಮೂಲದ ಪೂರ್ಣಿಮಾ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Share with

Leave a Reply

Your email address will not be published. Required fields are marked *