ಕಾಸರಗೋಡು: ಲಾರಿ ಡಿಕ್ಕಿ ಹೊಡೆದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ (ಜು.15) ಸಂಜೆ ಕಾಸರಗೋಡಿನ ಕುಂಜತ್ತೂರು ಎಂಬಲ್ಲಿ ನಡೆದಿದೆ.
ಬಿಹಾರ ಮೂಲದ ರಾಜ್ ಕುಮಾರ್ ಮಾಥರ್ (25), ರಾಜಸ್ಥಾನದ ದಾಮೋರ್ ಅಮಿತ್ ಗಣಪತಿ ಬಾಯ್ ( 23) ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡ ಓರ್ವ ಕಾರ್ಮಿಕನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇರಳದ ಮಣ್ಣಾರ್ ಕಾಡ್ ನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ವಾಹನ ನಿಲ್ಲಿಸಿ ಕೆಲಸ ನಿರ್ವಹಿಸುತ್ತಿದ್ದಾಗ ಈ ಅಪಘಾತ ನಡೆದಿದೆ. ಅತೀ ವೇಗದಿಂದ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾರ್ಮಿಕರ ಮೇಲೆ ಹರಿದಿದೆ.
ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರರದಲ್ಲಿರಿಸಲಾಗಿದೆ. ಲಾರಿ ಚಾಲಕನನ್ನು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.