ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

Share with

ಕೆರೆಗೆ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಜಿನ್ಹಾಪುರದಲ್ಲಿ ನಿನ್ನೆ ಸಂಜೆ ಕೆಲಸ ಮುಗಿಸಿ ಈಜಲು ತೆರಳಿದ್ದ ಗಣೇಶ್ (29) ರೋಹಿತ್ (28) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ನಿನ್ನೆ ಸಂಜೆ ಕೆಲಸ ಮುಗಿಸಿ ಈಜಲು ಕೆರೆಗೆ ತೆರಳಿದ್ದ ಯುವಕರು, ಮೇಲೆ ಬರಲು ಸಾಧ್ಯವಾಗದೇ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with