ಸುಳ್ಯ: ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಹಾಗೂ ಸಹಸವಾರ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖೆ ಕಛೇರಿ ಬಳಿ ಆ.4 ರಂದು ರಾತ್ರಿ ನಡೆದಿದೆ. ಮೈಸೂರು ಮೂಲದ ಮನೋಜ್ ಹಾಗೂ ಪವನ್ ಎಂಬವರು ಮೈಸೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಿಂದ ಮನೋಜ್ ಹಾಗೂ ಪವನ್ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐಬಿ ಬಳಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆಯ ಪಕ್ಕದಲ್ಲಿದ್ದ ಮೋರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.