
ಉಡುಪಿ: ಮೀನು ಕದ್ದ ಆರೋಪದ ಮೇಲೆ ಮಹಿಳೆಯೋರ್ವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಘಟನೆ ಉಡುಪಿ ತಾಲೂಕಿನ ಮಲ್ಪೆಯಲ್ಲಿ ನಡೆದಿದೆ.
ಮೀನು ಕದ್ದಿದ್ದಾಳೆ ಎನ್ನುವ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಜನರು ಹಲ್ಲೆ ಮಾಡಿದ್ದಾರೆ. ಮಹಿಳೆಯ ಕಪಾಳಕ್ಕೆ ಹೊಡೆದಿದ್ದಾರೆ, ಮರಕ್ಕೆ ಕಟ್ಟಿ ಹಾಕಿರುವ ಅಮಾನವೀಯ ವರ್ತನೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.