
ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಬಿಡುಗಡೆಗೊಳಿಸಲಾಗಿದೆ.
ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಆರೋಪಿಗಳ ಪರ ವಕೀಲೆ ಊರ್ಮಿಳಾ ಪುಲ್ಲಟ್ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದ ಬಂಧಿತ ಆರೋಪಿಗಳಾದ ಲಕ್ಷ್ಮೀ, ಶಿಲ್ಪ ಮತ್ತು ಸುಂದರ್ ಎಂಬವರನ್ನು ಬಿಡುಗಡೆಗೊಳಿಸುವಂತೆ ಆದೇಶ ನೀಡಿದೆ.ಸರಕಾರಿ ಅಭಿಯೋಜಕ ಜಯರಾಮ ಶೆಟ್ಟಿ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದು, ಆರೋಪಿಗಳ ಪರ ಹಿರಿಯ ವಕೀಲ ಶಾಂತಾರಾಮ್ ಶೆಟ್ಟಿ ವಾದ ಮಂಡಿಸಿದ್ದರು. ಈ ಮಧ್ಯೆ ಹೈಕೋರ್ಟ್ ಮೂವರು ಆರೋಪಿಗಳ ಬಿಡುಗಡೆಗೆ ಆದೇಶ ನೀಡಿದೆ.