ಮಡಿಕೇರಿ: ಹಾಲಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮಡಿಕೇರಿಯ ಮೆಡಿಕಲ್ ಕಾಲೇಜಿನ ಉಡುಪಿ ಮೂಲದ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.
ಉಡುಪಿ ಮೂಲದ ವಿಜೇಶ್ ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದ್ದು, ಬುಧವಾರ ಸಂಜೆ ಉಡುಪಿಯಿಂದ ವಿಜೇಶ್ ಮತ್ತು ಶಿವಾನಂದ್ ಎಂಬವರು ಬೈಕ್‍ನಲ್ಲಿ ಮಡಿಕೇರಿ ಕಡೆಗೆ ಹೋಗುವ ಸಂದರ್ಭದಲ್ಲಿ ಕಾಟಕೇರಿ ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಹಾಲಿನ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, ಇದರ ಪರಿಣಾಮ ಬೈಕ್ ಸವಾರ ವಿಜೇಶ್ ಅವರು ಮೃತಪಟ್ಟಿದ್ದು, ಹಿಂಬದಿ ಸವಾರ ಶಿವಾನಂದ್ ಅವರಿಗೆ ಗಂಭೀರ ಗಾಯಗಳಾಗಿವೆ. ಇವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.