ಉಡುಪಿ: ಬೊಗಸೆ ಭತ್ತದ ಬೀಜ ವಿತರಣೆ ಕಾರ್ಯಕ್ರಮ

Share with

ಉಡುಪಿ: ಕೃಷಿ ಪ್ರಯೋಗ ಪರಿವಾರ, ತೀರ್ಥಹಳ್ಳಿ ಹಾಗೂ ಭಾರತೀಯ ಕಿಸಾನ್ ಸಂಘದ ಉಡುಪಿ ಜಿಲ್ಲಾ ಸಮಿತಿಯ ಸಹಯೋಗದಲ್ಲಿ ‘ಬೊಗಸೆ ಭತ್ತದ ಬೀಜ ವಿತರಣೆ ಕಾರ್ಯಕ್ರಮವನ್ನು’ ಉಡುಪಿ ಪೇಜಾವರ ಮಠದ ರಾಮವಿಠಲ ಸಭಾಭವನದಲ್ಲಿ ಗುರುವಾರ ಆಯೋಜಿಸಲಾಗಿತ್ತು.
ವಿವಿಧ ಭತ್ತದ ತಳಿಯ ಬೀಜಗಳನ್ನು ವಿತರಿಸಿ ಮಾತನಾಡಿದ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿ ಅವರು, ದೇಶದಲ್ಲಿ ಹಿಂದಿನ ಕಾಲದಲ್ಲಿ ಗುರುಕುಲ ಪದ್ಧತಿ ಅನುಸರಿಸುತ್ತಿದ್ದರಿಂದ ಆಯಾ ಭಾಗಗಳಲ್ಲಿ ಭತ್ತದ ತಳಿಯ ವೈವಿಧ್ಯತೆ ಹಾಗೂ ವಿಶಿಷ್ಟತೆಯನ್ನು ಕಾಪಾಡಿಕೊಂಡು ಬರಲು ಸಾಧ್ಯವಾಗಿತ್ತು. ಆದರೆ, ಆಧುನಿಕತೆಯ ಭರಾಟೆಯಲ್ಲಿ ಭತ್ತದ ತಳಿಯನ್ನು ಸಂರಕ್ಷಿಸಿಕೊಳ್ಳುವುದು ಕಠಿಣವಾಗಿದೆ. ಭಾರತೀಯ ಭತ್ತದ ತಳಿಯಲ್ಲಿ ಔಷಧಿಯ ಗುಣವಿದ್ದು, ಇದನ್ನು ಸಂರಕ್ಷಿಸುವುದು ದೇಶ ಸೇವೆಗೆ ಸಮವಾಗಿದೆ. ಕೃಷಿ ಪರಿವಾರ ಹಳೆ ಭತ್ತದ ತಳಿಗಳನ್ನು ಉಸಿಳಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.
ವೇದಿಕೆಯಲ್ಲಿ ಕೃಷಿ ಇಲಾಖೆ ಉಪನಿರ್ದೇಶಕ ಮೋಹನ್ ರಾಜ್, ಬ್ರಹ್ಮಾವರ ಕೃಷಿ ಕೇಂದ್ರದ ಕೃಷಿ ವಿಜ್ಞಾನಿ ಡಾ.ಧನಂಜಯ್, ಭಾರತೀಯ ಕಿಸಾನ್ ಸಂಘದ ಉಪಾಧ್ಯಕ್ಷ ಸಾಂತೂರು ಶ್ರೀನಿವಾಸ ಭಟ್ ಉಪಸ್ಥಿತರಿದ್ದರು. ಕೃಷಿ ಪ್ರಯೋಗ ಪರಿವಾರದ ಶೀವತ್ಸ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾಕಿಸಂ ಪ‌್ರಧಾನ‌ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಕಾರ್ಯಕ್ರಮ ನಿರೂಪಿಸಿದರು.


Share with

Leave a Reply

Your email address will not be published. Required fields are marked *