ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಕನ್ನಡ ನಾಮಫಲಕ ಜನ ಜಾಗೃತಿ ಆಂದೋಲನವನ್ನು ಉಡುಪಿಯಲ್ಲಿ ಹಮ್ಮಿಕೊಳ್ಳಲಾಯಿತು.
ಕರವೇ ಕಚೇರಿಯಿಂದ ಅಂಗಡಿ ಮುಂಗಟ್ಟುಗಳಿಗೆ ಕನ್ನಡ ನಾಮಫಲಕ ವಿಚಾರವಾಗಿ ಎಚ್ಚರಿಕೆ ನೀಡಿ, ಕರಪತ್ರವನ್ನು ಹಂಚಲಾಯಿತು. ಕರಾವಳಿ ಬೈಪಾಸ್, ಬನ್ನಂಜೆ ಮಾರ್ಗವಾಗಿ ಸಿಟಿ ಹಾಗೂ ಸರ್ವಿಸ್ ಬಸ್ ನಿಲ್ದಾಣ ಜೋಡುಕಟ್ಟೆ ಮಾರ್ಗ ನಂತರ ನಗರಸಭೆಗೆ ಮುತ್ತಿಗೆ ಹಾಕಲಾಯಿತು. ಈ ಸಂದರ್ಭದಲ್ಲಿ ಪೊಲೀಸರ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.
ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಹೆಗಡೆ, ಉಡುಪಿ ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಗೀತಾ ಪಂಗಾಳ, ಜಿಲ್ಲಾ ಉಪಾಧ್ಯಕ್ಷ ಸಂತೋಷ ಕುಲಾಲ್, ಕಾರ್ಯದರ್ಶಿ ಸಿದ್ದಣ್ಣ ಪೂಜಾರಿ, ಜಿಲ್ಲಾ ಸಾಂಸ್ಕೃತಿ ಕಾರ್ಯ ದರ್ಶಿ ಕೃಷ್ಣ, ಜಿಲ್ಲಾ ಸಹಕಾರ್ಯದರ್ಶಿ ಗಣೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೋಪಾಲ, ಮುಖಂಡರಾದ ದೇವಕಿ ಬಾರ್ಕೂರು, ಜ್ಯೋತಿ, ಮೋಹಿನಿ, ಚಂದ್ರಕಲಾ, ಜ್ಯೋತಿ ಆರ್.ಉಡುಪಿ ಹೆಲನ್, ಶಶಿಕಲಾ ನವೀನ್, ಪವಿತ್ರ ಶೆಟ್ಟಿ, ಶಾಲಿನಿ ಸುರೇಶ್ ಮೊದಲಾದವರು ಉಪಸ್ಥಿತರಿದ್ದರು.