ಉಡುಪಿ: ಜನಗಣತಿ ವರದಿ ಸಂಪುಟದಲ್ಲಿ ಚರ್ಚೆಯಾಗಲಿ: ಕೆ.ಜಯಪ್ರಕಾಶ್ ಹೆಗ್ಡೆ

Share with

ಉಡುಪಿ: ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿದೆ. ಈ ವರದಿಯ ಬಗ್ಗೆ ಚರ್ಚೆ ಮಾಡಲು ನಾನು ಸಿದ್ಧ ಇದ್ದೇನೆ. ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ. ಸರಕಾರ ಒಪ್ಪದೆ ಈ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ನಿಕಟಪೂರ್ವ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ನಿಕಟಪೂರ್ವ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಮಾ.4ರಂದು ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂತರಾಜ್ ಅವರ ವರದಿಯಲ್ಲಿದ್ದ ಜನಸಂಖ್ಯೆಯ ದತ್ತಾಂಶವನ್ನು ನನ್ನ ನೇತೃತ್ವದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಪಡೆದುಕೊಂಡು ಅದನ್ನು ಅಧ್ಯಯನ ಮಾಡಿ ಕೆಲವು ಶಿಫಾರಸುಗಳನ್ನು ಸರಕಾರಕ್ಕೆ ಮಾಡಿದೆ. ಆಯೋಗವು ಯಾರ ಮನೆಗೂ ಹೋಗಿಲ್ಲ ಎಂಬ ಮಾತುಗಳು ಅಲ್ಲಲ್ಲಿ ಕೇಳಿ ಬರುತ್ತಿವೆ. ಆಯೋಗದ ಅಧ್ಯಕ್ಷನಾಗಿ ನಾನು ಯಾರ ಮನೆಗೂ ಹೋಗಿಲ್ಲ, ಆದರೆ ಶಿಕ್ಷಕರು ಕೊಟ್ಟ ದತ್ತಾಂಶದ ಆಧಾರದ ಮೇಲೆ ನಾವು ಅಧ್ಯಯನ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಿದ್ದೇವೆ.ವರದಿಯ ಬಗ್ಗೆ ಸಂಪುಟದಲ್ಲಿ ಚರ್ಚೆಯಾಗಲಿ ಎಂದರು.

ರಾಜ್ಯದಲ್ಲಿ 1300ಕ್ಕಿಂತ ಹೆಚ್ಚು ಜಾತಿಗಳು ಇರುವಾಗ 10 ಜಾತಿಗಳ ಹೆಸರುಗಳು ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸರಕಾರ ಈ ವರದಿ ಬಗ್ಗೆ ಅಧಿಕೃತವಾಗಿ ತೀರ್ಮಾನ ಮಾಡಿದ ಮೇಲೆ ಈ ವಿಚಾರದಲ್ಲಿ ಚರ್ಚೆ ಮಾಡಬೇಕಾಗುತ್ತದೆ. ಸರಕಾರದ ಬಿಡುಗಡೆ ಮಾಡದೆ ಯಾವುದನ್ನು ಅಧಿಕೃತ ದತ್ತಾಂಶ ಎಂದು ಒಪ್ಪಲು ಸಾಧ್ಯವಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಿಲ್ಲಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಅರಾಡಿ ಉಪಸ್ಥಿತರಿದ್ದರು. ಪತ್ರಕರ್ತ ಚೇತನ್ ಮಟಪಾಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.


Share with

Leave a Reply

Your email address will not be published. Required fields are marked *