ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ಸಲುವಾಗಿ ಏಪ್ರಿಲ್ 24 ರ ಸಂಜೆ 5 ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12 ರ ವರೆಗೆ ಹಾಗೂ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂ. 4 ರ ಮಧ್ಯರಾತ್ರಿ 12 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಹಾಗೂ ಕ್ಲಬ್‌ಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.