ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಅಜ್ಜರಕಾಡು ವಿವೇಕಾನಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 186ರಲ್ಲಿ ಏಪ್ರಿಲ್ 26ರಂದು ಮತ ಚಲಾಯಿಸಿದರು.
ಬಳಿಕ ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. 9ಗಂಟೆ ಸುಮಾರಿಗೆ ಶೇ.12.82 ರಷ್ಟು ಮತದಾನ ಆಗಿದೆ. ತುಂಬಾ ಜನರು ಮುತುವರ್ಜಿಯಿಂದ ಮತಕೇಂದ್ರಕ್ಕೆ ಬಂದು ಮತ ಚಲಾಯಿಸುತ್ತಿದ್ದಾರೆ.
ಎಲ್ಲ ಮತಗಟ್ಟೆಗಳಲ್ಲಿಯೂ 50ರಿಂದ 60 ಮಂದಿ ಕ್ಯೂನಲ್ಲಿ ನಿಂತಿದ್ದಾರೆ. ಆದ್ದರಿಂದ ಮತದಾನಕ್ಕೆ ಪ್ರತಿಕ್ರಿಯೆ ಚೆನ್ನಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.78ರಷ್ಟು ಮತದಾನವಾಗಿತ್ತು. ಈ ಚುನಾವಣೆಯಲ್ಲಿ ಅದಕ್ಕಿಂತ ಹೆಚ್ಚು ಮತದಾನ ಆಗುವ ಭರವಸೆ ಇದೆ ಎಂದರು.