ಉಡುಪಿ: ನಿಟ್ಟೂರು ಹುಂಡೈ ಶೋರೂಮ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಳಪೆ ಕಾಮಗಾರಿಯಿಂದ ಬೃಹತ್ ಗುಂಡಿಯೊಂದು ಬಿದ್ದಿದ್ದು, ಇದು ವಾಹನ ಸವಾರರಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ.
ಹೆದ್ದಾರಿಯ ಉದ್ದಕ್ಕೂ ಅಲ್ಲಾಲಿ ಗುಂಡಿಗಳು ಉದ್ಭವವಾಗಿವೆ. ರಸ್ತೆಯಲ್ಲಿ ಎತ್ತರ ತಗ್ಗು ಇರುವುದರಿಂದ ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ಎಡವಿ ಬೀಳುತ್ತಿದ್ದಾರೆ. ಇತ್ತೀಚೆಗೆ ಓರ್ವ ಯುವಕ ಎಡವಿ ಬಿದ್ದು ಮೃತಪಟ್ಟಿದ್ದಾನೆ.
ಹೆದ್ದಾರಿಯ ಚರಂಡಿ ಕುಸಿಯುವ ಹಂತದಲ್ಲಿದೆ. ಕೂಡಲೇ ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ತಕ್ಷಣ ಸಮಸ್ಯೆಯನ್ನು ಪರಿಹರಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಆಗ್ರಹಿಸಿದ್ದಾರೆ.