ಉಡುಪಿ: ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಟೆಂಪೋ ಹಾಗೂ ಲಾರಿ ಮಾಲಕರ ಒಕ್ಕೂಟವು ಅ.3ರಂದು ಉಡುಪಿ ಜಿಲ್ಲಾ ಬಂದ್‌ಗೆ ನೀಡಿರುವ ಕರೆ ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿಯಾಗಿದ್ದು, ಈ ರೀತಿಯ ಬಂದ್ ಹಾಗೂ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ|ಅರುಣ್.ಕೆ ತಿಳಿಸಿದ್ದಾರೆ.
ಯಾವುದೇ ಬಂದ್‌ಗೆ ಕರೆ ನೀಡುವುದು, ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಮತ್ತು ಜನಸಾಮಾನ್ಯರ ಮೂಲಭೂತ ಹಕ್ಕು ವಿರೋಧಿ ಎಂದು ಕೇರಳ ಹೈಕೋರ್ಟ್ ಈ ಹಿಂದೆ ತನ್ನ ತೀರ್ಪಿನಲ್ಲಿ ತಿಳಿಸಿದ್ದು, ಈ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು ಎತ್ತಿ ಹಿಡಿದಿತ್ತು, ಆದುದರಿಂದ ಜನಸಾಮಾನ್ಯರ ಮೂಲಭೂತ ಹಕ್ಕು ಚ್ಯುತಿಗೊಳಿಸುವ ಯಾವುದೇ ರೀತಿಯ ಬಂದ್ ಅಥವಾ ಅದಕ್ಕೆ ಸಂಬಂಧಿಸಿದಂತೆ ಇತರ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಮತ್ತು ಉಡುಪಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹಮ್ಮಿಕೊಳ್ಳಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಎಸ್.ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.