ಉಡುಪಿ : ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಜರಗಲಿರುವ
ಗುರು ಸಂದೇಶ ಸಾಮರಸ್ಯ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಇಂದು ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಸಮಾಲೋಚನಾ ಸಭೆ ಯಶಸ್ವಿಯಾಗಿ ನಡೆಯಿತು.
ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಸಂಘದ ಅಧ್ಯಕ್ಷರು ಮತ್ತು ಸಮಾಜದ ಮುಖಂಡರು ಭಾಗವಹಿಸಿ ಉತ್ತಮ ಸಲಹೆಗಳನ್ನು ನೀಡಿ, ಕೊನೆಗೆ ಗುರು ಸಂದೇಶ ಸಾಮರಸ್ಯ ಜಾಥಾದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.