ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಕಾಪು ಪಡು ಇದರ ನೂತನ ವಿವೇಕ ಶಾಲಾ ಕೊಠಡಿಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಫೆ.1ರಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪುರಸಭೆಯ ಸದಸ್ಯರಾದ ನಿತಿನ್, ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಧ್ಯಕ್ಷರಾದ ಶೀಲರಾಜ್, ರಾಮನಗರ ಫ್ರೆಂಡ್ಸ್ ಅಧ್ಯಕ್ಷರಾದ ಕೃಷ್ಣರಾಜ್, ಮೊಗವೀರ ಮಹಾಸಭಾ ಅಧ್ಯಕ್ಷರಾದ ಕುಶ ಸಾಲಿಯಾನ್, ಮೊಗವೀರ ಮಹಾಜನ ಮಹಿಳಾ ಮಂಡಳಿ ಅಧ್ಯಕ್ಷರಾದ ಶಕುಂತಲಾ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷರಾದ ಸುಚರಿತಾ, ಶಾಲಾ ಮುಖ್ಯ ಶಿಕ್ಷಕರಾದ ಉಷಾ ಉಪಸ್ಥಿತರಿದ್ದರು.