ಉಡುಪಿ: ಸೇತುವೆಯಿಂದ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!

Share with

ಉಡುಪಿ: ವ್ಯಕ್ತಿಯೊಬ್ಬರು ಉದ್ಯಾವರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.13ರಂದು ಬೆಳಗಿನ ಜಾವ ನಡೆದಿದೆ.

ನಗರದ ಕೋರ್ಟ್ ಬಳಿಯ ನಿವಾಸಿ ರವೀಂದ್ರ ಭಟ್

ಮೃತರನ್ನು ನಗರದ ಕೋರ್ಟ್ ಬಳಿಯ ನಿವಾಸಿ ರವೀಂದ್ರ ಭಟ್(55) ಎಂದು ಗುರುತಿಸಲಾಗಿದ್ದು, ಬೆಳಿಗ್ಗೆ 4 ಗಂಟೆ ಸುಮಾರಿಗೆ ಪಾರ್ಸೆಲ್ ತೆಗೆದುಕೊಂಡು ಬರುವುದಾಗಿ ಹೇಳಿ ಹೊರಗೆ ಹೋದವರು ಮನೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು. ಅಲ್ಲಿಂದ ತನ್ನ ಸ್ಕೂಟರ್‌ನಲ್ಲಿ ಉದ್ಯಾವರ ಸೇತುವೆ ಬಳಿ ತೆರಳಿ, ಸೇತುವೆಯಲ್ಲಿಯೇ ಸ್ಕೂಟರ್ ನಿಲ್ಲಿಸಿ, ಮೇಲಿಂದ ಹೊಳೆಗೆ ಹಾರಿದ್ದರು ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಾಪು ಪೊಲೀಸರು, ಸ್ಥಳೀಯರ ಸಹಕಾರದೊಂದಿಗೆ ದೋಣಿ ಮೂಲಕ ಹುಡುಕಾಟ ನಡೆಸಿದರು. ಸಂಜೆ ವೇಳೆ ಅವರ ಮೃತ ದೇಹವು ಅಂಕುದ್ರು ಬಳಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


Share with

Leave a Reply

Your email address will not be published. Required fields are marked *