ಉಡುಪಿ: ಸ್ಕೂಟರ್ ಸಮೇತ ನೀರಿಗೆ ಬಿದ್ದ ವ್ಯಕ್ತಿ ನಾಪತ್ತೆ

Share with

ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಜ.1 ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ವ್ಯಕ್ತಿಯೋರ್ವ ಸ್ಕೂಟರ್ ಸಮೇತನಾಗಿ ದಕ್ಕೆ ಬಳಿಯ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾಗಿದ್ದಾರೆ.

ಸ್ಕೂಟರ್‌ ಪತ್ತೆಯಾಗಿದ್ದು ಹಗ್ಗದ ಸಹಾಯದಿಂದ ಮೇಲಕ್ಕೆ ತರಲಾಗಿದೆ ಎಂದು ತಿಳಿದು ಬಂದಿದೆ.

ನೀರಿಗೆ ಬಿದ್ದ ವ್ಯಕ್ತಿಯನ್ನು ತಮಿಳುನಾಡು ಮೂಲದ ಮೀನುಗಾರ ಎಂದು ಗುರುತಿಸಲಾಗಿದ್ದು, ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಎನ್ನಲಾಗಿದೆ.

ಇನ್ನು ನೀರಿಗೆ ಬಿದ್ದ ಮಾಹಿತಿ ತಿಳಿದು ತಕ್ಷಣ ಈಶ್ವರ್‌ ಮಲ್ಪೆ ಅವರು ಧಾವಿಸಿ ಬಂದು ನೀರಿಗೆ ಧುಮುಕಿ ಎಲ್ಲ ಕಡೆ ಜಾಲಾಡಿದರೂ ಆತನ ದೇಹ ಸಿಗಲಿಲ್ಲ. ಆದರೆ ಸ್ಕೂಟರ್‌ ಮಾತ್ರ ಪತ್ತೆಯಾಗಿದ್ದು ಹಗ್ಗದ ಸಹಾಯದಿಂದ ಮೇಲಕ್ಕೆ ತರಲಾಗಿದೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *