ಉಡುಪಿ: ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಗರ್ಭಿಣಿ ಮಂಗವೊಂದು ಸಾವನ್ನಪ್ಪಿದ ದಾರುಣ ಘಟನೆ ಉಡುಪಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಂಗವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು, ದೊಡ್ಡರಂಗಡಿಯ ಪ್ರವೀಣ್ ಶೆಟ್ಟಿ ಅವರ ಸಹಕಾರದಿಂದ ಬೈಲೂರಿನ ಪಶು ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿದರು. ಪಶುವೈದ್ಯ ಡಾ. ವಾಗೇಶ್ ಅವರು ಸಕಾಲದಲ್ಲಿ ಚಿಕಿತ್ಸೆ ನೀಡಿದರೂ ಮಂಗವು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದೆ. ಆ ಬಳಿಕ ಒಳಕಾಡು ಅವರು ಮಂಗದ ಕಳೇಬರವನ್ನು ಅರಣ್ಯ ಇಲಾಖೆಯ ವಶಕ್ಕೆ ನೀಡಿದರು. ಬ್ರಹ್ಮಗಿರಿಯಲ್ಲಿ ಇರುವ ಅರಣ್ಯ ಇಲಾಖೆಯ ವಠಾರದಲ್ಲಿ ಅಂತ್ಯಸಂಸ್ಕಾರ ನಡೆಯಿತು. ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ಗುರುರಾಜ್, ವಲಯ ಅರಣ್ಯಾಧಿಕಾರಿ ವನಜಾಕ್ಷಿ ಇದ್ದರು.