ಉಡುಪಿ : ಪ್ರಾದೇಶಿಕ ವಿಭಾಗದ ಬಂಟ್ವಾಳ ತಾಲೂಕಿನಲ್ಲಿ ರಚನೆಯಾಗಲಿರುವ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಪೂರ್ವಭಾವಿ ಸಭೆಯನ್ನು ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ರೋನಾಲ್ಡ್ ಡಿಸೋಜಾ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿಗಳಾದ ಶ್ರೀ ಜೈವಂತ ಪಟಗಾರ್, ಜನಜಾಗೃತಿ ಕಾರ್ಯಕ್ರಮದ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ, ಬಂಟ್ವಾಳ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ, ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕರಾದ ಶ್ರೀ ನಿತೇಶ್ ಕೆ, ಹಾಗೂ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಸ್ವಯಂ ಸೇವಕರು ಉಪಸ್ಥಿತಿಯಿದ್ದರು