ಅಮೃತ ಭಾರತ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಉಡುಪಿ ರೈಲ್ವೆ ನಿಲ್ದಾಣ ಆಯ್ಕೆ; ಶೋಭಾ ಕರಂದ್ಲಾಜೆ ಹರ್ಷ

Share with

ಉಡುಪಿ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಕೇಂದ್ರದ ನರೇಂದ್ರ ಮೋದಿ ನೇತ್ರತ್ವದ ಸರಕಾರವು ಪ್ರಾರಂಭಿಸಿದ ಅಮೃತ ಭಾರತ ರೈಲು ನಿಲ್ದಾಣಗಳ ಅಭಿವೃದ್ಧಿ ಯೋಜನೆಯಡಿ ಉಡುಪಿ ರೈಲ್ವೆ ನಿಲ್ದಾಣವನ್ನು ಆಯ್ಕೆ ಮಾಡಿರುವುದರ ಬಗ್ಗೆ ಪ್ರಸ್ತಾಪಿಸಿದ್ದ ಕೇಂದ್ರ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಹರ್ಷ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ

“ಅಮೃತ್ ಭಾರತ್” ಯೊಜನೆಯ ಮೂಲಕ ಉಡುಪಿ ರೈಲು ನಿಲ್ದಾಣವನ್ನು ಸಂಪೂರ್ಣ ಆಧುನೀಕರಿಸಿ ವಿಶ್ವದರ್ಜೆಯ ಪ್ರಯಾಣಿಕ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗಲಿದೆ.

ತನ್ಮೂಲಕ ಶೈಕ್ಷಣಿಕ ಕೇಂದ್ರ ಮಣಿಪಾಲ, ಧಾರ್ಮಿಕ ಕೇಂದ್ರ ಉಡುಪಿ ಹಾಗೂ ಬಂದರು ನಗರಿ ಮಲ್ಪೆಗೆ ಸಂಬಂಧಿಸಿದ ಪ್ರಯಾಣಿಕರಿಗೆ ಬಹಳಷ್ಟು ಅನುಕೂಲವಾಗಲಿದೆ. ಅಮೃತ್ ಭಾರತ್ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಲು ರೈಲ್ವೆ ಇಲಾಖೆಗೆ ಸೂಚಿಸಲಾಗುವುದು ಎಂದು ಶೋಭಾ ಕರಂದ್ಲಾಜೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *