ಉಡುಪಿ: ದ್ವಿಚಕ್ರ ವಾಹನವೊಂದು ಸ್ಕಿಡ್ ಆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಶಾರದಾ ಹೋಟೆಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಘಟನೆಯಲ್ಲಿ ಬೈಕ್ ಸವಾರ ಕನ್ನರ್ಪಾಡಿಯ ಸೋಮನಾಥ್ ಶೆಟ್ಟಿ (42) ಗಂಭೀರವಾಗಿ ಗಾಯಗೊಂಡಿದ್ದಾರೆ. ಸಹಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಗಾಯಾಳನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಸಂಚಾರಿ ಠಾಣೆಯ ಪೊಲೀಸ್ ವೀರಯ್ಯ ಕಾರ್ಯಾಚರಣೆಗೆ ಸಹಕರಿಸಿದರು.