ಉಡುಪಿ: ಇಲ್ಲಿನ ನಗರಸಭಾ ವ್ಯಾಪ್ತಿಯ ಬೈಲೂರು ಮಿಷನ್ ಕಂಪೌಂಡ್ ಜಂಕ್ಷನ್‌ನಿಂದ ಕೊರಂಗ್ರಪಾಡಿ ಜಂಕ್ಷನ್ ರಸ್ತೆ ಕಾಂಕ್ರೀಟೀಕರಣ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿರುವ ಹಿನ್ನೆಲೆ, ಜುಲೈ 15 ರ ವರೆಗೆ ಸದರಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.