ಉಡುಪಿ: ಅದಾನಿ ಫೌಂಡೇಶನ್ ಹಾಗೂ ಅದಾನಿ ಪವರ್ ಲಿಮಿಟೆಡ್ ಉಡುಪಿ ವತಿಯಿಂದ ಸ್ಥಾವರದ ಸುತ್ತಮುತ್ತಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಜ.29ರಂದು ಪಡುಬಿದ್ರಿ ಬಂಟರ ಭವನದಲ್ಲಿ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿದ್ಯಾರ್ಥಿ ವೇತನ ವಿತರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅದಾನಿ ಪವರ್ ಲಿಮಿಟೆಡ್ ಉಡುಪಿ ಅಧ್ಯಕ್ಷರಾದ ಕಿಶೋರ್ ಆಳ್ವ, ಪಡುಬಿದ್ರಿ ಬಂಟರ ಸಂಘದ ಸಿರಿಮುಡಿ ದತ್ತಿನಿಧಿ ಅಧ್ಯಕ್ಷರಾದ ಸಾಂತೂರು ಭಾಸ್ಕರ ಶೆಟ್ಟಿ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಷ್ಮಾ ಮೆಂಡನ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ರಾವ್, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತಾ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಯೇಶ್ ಪೈ, ತೆಂಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪ್ರವೀಣ್ ಉಪಸ್ಥಿತರಿದ್ದರು.