ಉಡುಪಿ: ಹಿರಿಯ ವೈದ್ಯ ಡಾ. ರಾಜಾ ನಿಧನ

Share with


ಉಡುಪಿ: ಹಿರಿಯ ವೈದ್ಯ, ನರರೋಗ ತಜ್ಞರಾದ ಡಾ.ರಾಜಾ(73) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
ಇಂದು ಬೆಳಿಗ್ಗೆ ಮಣಿಪಾಲದ ರಾಜೀವ್ ನಗರದ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಬಂದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದರು. ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.


Share with

Leave a Reply

Your email address will not be published. Required fields are marked *