ಸಿಟಿ ಬಸ್ ಗಳ ವಿರುದ್ಧ ಉಡುಪಿ ಸಂಚಾರ ಪೊಲೀಸರ ಕಾರ್ಯಾಚರಣೆ

Share with

ಕರ್ಕಶ ಹಾರ್ನ್ ತೆರವುಗೊಳಿಸಿ ದಂಡ ವಿಧಿಸಿದ ಪೊಲೀಸರು

ಉಡುಪಿ: ಗಡುವು ಮುಗಿದ ಹಿನ್ನೆಲೆಯಲ್ಲಿ ಇಂದು ಕಾರ್ಯಾಚರಣೆ ನಡೆಸಿದ ಉಡುಪಿ ಸಂಚಾರ ಪೊಲೀಸರು ಉಡುಪಿ ಸಿಟಿ ಬಸ್ ಗಳ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಿ ದಂಡ ವಿಧಿಸಿದರು.
ಜೂ.3ರಂದು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಉಡುಪಿ ಸಿಟಿ ಬಸ್ ಮಾಲೀಕರು ಮತ್ತು ಸರ್ವಿಸ್ ಬಸ್ ಮಾಲೀಕರ ಸಭೆಯಲ್ಲಿ ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್ ಗಳಲ್ಲಿ ಅಳವಡಿಸಲಾದ ಕರ್ಕಶ ಹಾರ್ನ್ ಗಳನ್ನು ಜೂ.15ರೊಳಗೆ ಕಡ್ಡಾಯವಾಗಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಗಡುವು ಮುಗಿದ ಹಿನ್ನೆಲೆಯಲ್ಲಿ ಉಡುಪಿ ಸಂಚಾರ ಪೊಲೀಸ್ ಠಾಣೆಯ ಎಸ್ಸೈ ಸುದರ್ಶನ್ ದೊಡ್ಡಮನಿ ನೇತೃತ್ವದಲ್ಲಿ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು ಏಳು ಬಸ್ ಗಳ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಲಾಯಿತು. ಬಸ್ ಗಳ ವಿರುದ್ಧ ತಲಾ 500ರೂ.ನಂತೆ ಒಟ್ಟು 3500ರೂ. ದಂಡ ವಿಧಿಸಲಾಯಿತು. ಎರಡನೇ ಬಾರಿಗೆ 1000ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ.
ಈಗಾಗಲೇ ಗಡುವು ನೀಡಿರುವ ಹಿನ್ನೆಲೆಯಲ್ಲಿ ಬಹುತೇಕ ಸಿಟಿ ಬಸ್ ಗಳು ಕರ್ಕಶ ಹಾರ್ನ್ಗಳನ್ನು ತೆರವುಗೊಳಿಸಿದೆ.  ಆದುದರಿಂದ ಈ ಕಾರ್ಯಾಚರಣೆ  ಮತ್ತೆ ಮುಂದುವರೆಯಲಿದೆ. ಮುಂದೆ ಸರ್ವಿಸ್ ಬಸ್ ಗಳ ವಿರುದ್ಧವೂ ಕಾರ್ಯಚರಣೆ ನಡೆಸಲಾಗುವುದು ಎಂದು ಎಸ್ಸೈ ಸುದರ್ಶನ್ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *