ಉಡುಪಿ: ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಉದ್ಯಾವರ ಚೆಕ್‌ಪೋಸ್ಟ್‌ನಲ್ಲಿ 4.51 ಲಕ್ಷ, ಶಿರೂರು ಚೆಕ್ ಪೋಸ್ಟ್‌ನಲ್ಲಿ 3.50 ಲಕ್ಷ ರೂ. ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7,500 ರೂ.ಮೌಲ್ಯದ 100 ಲೀ. ಶೇಂದಿಯನ್ನು ವಶಪಡಿಸಿಕೊಳ್ಳಲಾಗಿದೆ.
44,000 ರೂ. ಮೌಲ್ಯದ 1.108 ಕೆಜಿ ಗಾಂಜಾವನ್ನು ಸೆನ್ ಪೊಲೀಸ್ ವಶಪಡಿಸಿಕೊಂಡಿದ್ದಾರೆ. ಹೆಜಮಾಡಿ ಚೆಕ್‌ಪೋಸ್ಟ್‌ನಲ್ಲಿ 25 ಶರ್ಟ್ ಮತ್ತು 30 ಪ್ಯಾಂಟ್ ಸಹಿತ ಒಟ್ಟು 79,737 ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಕುಂದಾಪುರ ಗ್ರಾಮಾಂತರ ಪೊಲೀಸರು 1440 ರೂ. ಮೌಲ್ಯದ 3.240 ಲೀ ಮದ್ಯ ವಶಪಡಿಸಿಕೊಂಡಿದ್ದು, ಮೊಕದ್ದಮೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದರು.