ಉಡುಪಿ: ಉದ್ಯಾವರ ಬಳಿಯ ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ. ಭಕ್ತನ ರೂಪದಲ್ಲಿ ದೈವಸ್ಥಾನಕ್ಕೆ ಬಂದ ಅನಾಮಿಕ, ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿ ಪರಾರಿಯಾಗಿದ್ದಾನೆ.
ಸಿಸಿಟಿವಿ ಅಳವಡಿಕೆ ಆಗಿರುವುದು ಗಮನಕ್ಕೆ ಬಂದರೂ ಹುಂಡಿ ಕಳ್ಳತನ ಮಾಡಿದ್ದಾನೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವಿಡಿಯೋ ಲಭ್ಯವಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.