
ಉಳ್ಳಾಲ: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಅಸ್ಥಿಗಳ ಹಿಂದಿನ ಅಸಲಿಯತ್ತನ್ನು ಪತ್ತೆ ಹಚ್ಚಿದ್ದಾರೆ.ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ ಮನೆಯ ಆವರಣದ ಬಳಿ ಪ್ರಯೋಗಾಲಯದ ಮಾದರಿಯ ಅಸ್ಥಿಗಳು ಲಕೋಟೆಯಲ್ಲಿ ಸಂಸ್ಕರಿಸಿದ ರೀತಿಯಲ್ಲಿ ಪತ್ತೆಯಾಗಿದೆ. ಈಸುದ್ದಿ ತಿಳಿದ ಜನರು ಘಟನಾ ಸ್ಥಳಕ್ಕೆ ಜಮಾಯಿಸಿದ್ದರು. ಈ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಉಳ್ಳಾಲ ಪೊಲೀಸರು ಅಸ್ಥಿಗಳು ತುಂಬಿದ್ದ ಲಕೋಟೆಯನ್ನು ವಶಕ್ಕೆ ಪಡೆದಿದ್ದಾರೆ.