ಉಡುಪಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಜ.1ರಂದು ಮಂಡನೆ ಮಾಡಿದ ಕೇoದ್ರ ಬಜೆಟ್ ನಿಂದ ದೇಶದ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ.
ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ, ಸಣ್ಣ ನಗರಗಳಿಗೆ ಮೆಟ್ರೋ ವಿಸ್ತರಣೆ, ಭಾರತೀಯ ರೈಲ್ವೆಗೆ ಹೆಚ್ಚಿನ ಅನುದಾನ, ಹೊಸ ರೈಲ್ವೆ ಕಾರಿಡಾರ್ ನಿರ್ಮಾಣ, ದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನ ಮತ್ತು ಬಡವರಿಗೆ 3 ಲಕ್ಷ ಮನೆ ನಿರ್ಮಾಣದಂತಹ ಯೋಜನೆಯಿಂದ ದೇಶದ ಜನತೆಯ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆ ಉನ್ನತೀಕರಣವಾಗಲಿದೆ ಎಂದು ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.