ಹಾಸನಾಂಬೆ ದೇವಿಯ ದರ್ಶನ ಪಡೆದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

Share with

ಹಾಸನದ ಅಧಿದೇವತೆಯೆಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಹಾಸನಾಂಬೆ ದೇವಿಯ ದರ್ಶನವನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಭಕ್ತಿಪೂರ್ವಕವಾಗಿ ಪಡೆದುಕೊಂಡರು. ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ ಅವರು, ದೇವಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ಶ್ರದ್ಧಾಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಿಯ ಆಶೀರ್ವಾದ ಪಡೆದು ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಮಳೆ-ಬೆಳೆಯಾಗಲಿ ಎಂದು ಪ್ರಾರ್ಥಿಸಿದರು. ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವರು ಧಾರ್ಮಿಕ ಭಕ್ತಿಯನ್ನು ಮೆರೆದರು.


Share with

Tags:

Leave a Reply

Your email address will not be published. Required fields are marked *