ಉಪ್ಪಿನಂಗಡಿ: ಎರಡು ಮನೆಗಳಲ್ಲಿ ಚಿನ್ನಾಭರಣ ಕಳ್ಳತನ

Share with

ಉಪ್ಪಿನಂಗಡಿ: ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕದ್ದೊಯ್ದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಏ. 22 ರ ರಾತ್ರಿ ನಡೆದಿದೆ.ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ ಮತ್ತು ನಾದಿನಿ ಮನೆಯೊಳಗೆ ಮಲಗಿದ್ದರು.

ಈ ವೇಳೆ ಮನೆಯೊಳಗೆ ನುಗ್ಗಿದ ಕಳ್ಳ ಒಟ್ಟು 12 ಗ್ರಾಂ ತೂಕವಿರುವ 3 ಉಂಗುರ, ಹಾಗೂ 6 ಗ್ರಾಂ ತೂಕವಿರುವ 4 ಉಂಗುರ ಮತ್ತು 3 ಸಾವಿರ ನಗದು ಹಣ ಕದ್ದೊಯ್ದಿದ್ದಾನೆ.ಇದೇ ಗ್ರಾಮದ ಕೋಡಿ ಮನೆ ನಿವಾಸಿ ಅನ್ವರ್ ಅವರ ಮನೆಗೂ ನುಗ್ಗಿದ ಕಳ್ಳ, ಮನೆ ಮಂದಿ ಮಲಗಿದ್ದಾಗಲೇ ಮನೆಯೊಳಗಿನ ಕಪಾಟನ್ನು ಜಾಲಾಡಿ, ಅದರಲ್ಲಿದ್ದ ನಗದು ಹಣವನ್ನು ತನ್ನ ಜೇಬಿಗೆ ತುಂಬಿಸಿಕೊಳ್ಳುವ ಭರದಲ್ಲಿ ಅಲ್ಲೇ ಕೆಳಕ್ಕೆ ಬೀಳಿಸಿದ್ದಾನೆ ಎನ್ನಲಾಗಿದೆ.

ಆ ವೇಳೆ ಮನೆ ಯಜಮಾನಿ ಎಚ್ಚರಗೊಂಡಿದ್ದು, ಕಳ್ಳ ಓಡಿ ತಪ್ಪಿಸಿಕೊಂಡಿದ್ದಾನೆ.ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *