
ಸಕಲೇಶಪುರ: ಈ ದಿನ ಬೆಳಿಗ್ಗೆ ಸಕಲೇಶಪುರ ತಾಲ್ಲೂಕು ವಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಉಪಚುನಾವಣೆಯ ಮತ ಎಣಿಕೆಯು ಸಕಲೇಶಪುರ ನಗರದ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಯಾದ ತಹಶೀಲ್ದಾರ್ ಅರವಿಂದ್ ಕೆ.ಎಂ ರವರ ನೇತೃತ್ವದಲ್ಲಿ ನಡೆದಿದ್ದು, ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾದ ರಂಜಿತಾ H.P ಅವರು ಗೆದ್ದಿರುತ್ತಾರೆ.





