ಮಂಗಳೂರು- ಮುಂಬೈ ನಡುವೆ ವಂದೇ ಭಾರತ್ ರೈಲು

Share with

ಮಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವೆ ವಂದೇ ಭಾರತ್ ರೈಲು ಸಂಪರ್ಕಕ್ಕ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಂಗಳೂರು-ಮುಂಬೈ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

‘ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲು ರದ್ದಾಗಬಹುದೆಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈ ರೈಲನ್ನು ರದ್ದು ಮಾಡದೇ ಮುಂಬಯಿವರೆಗೆ ಪ್ರತ್ಯೇಕ ಹೊಸ ರೈಲಾಗಿ ಓಡಿಸುವಂತೆ ಸಚಿವರನ್ನು ಕೋರಿದ್ದು, ಸಚಿವರು ತಕ್ಷಣವೇ ಮಂಗಳೂರು-ಮಡಗಾಂವ್ ವಂದೇಭಾರತ್ ರೈಲನ್ನು ರದ್ದು ಮಾಡದಂತೆಯೂ ಮತ್ತು ಅದನ್ನು ಮುಂಬಯಿ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಮಾಹಿತಿ ನೀಡಿದ್ದಾರೆ.


Share with

Leave a Reply

Your email address will not be published. Required fields are marked *