ಉಪ್ಪಳ: ಕುಬಣೂರು ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಪ್ರತಿಷ್ಟಾ ದಿನಾಚರಣೆ 27-5-2024 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬೆಳಿಗ್ಗೆ ಗಣಹೋಮ, ಏಕಾದಶ ರುದ್ರಾಭಿಷೇಕ, ೧೦.೩೦ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಆರಂಭ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ೭.೩೦ರಿಂದ ೯ರ ತನಕ ಕುಬಣೂರು ಶ್ರೀ ಶಾಸ್ತಾವೇಶ್ವರ ಭಜನಾ ಸಂಘದ ವಾರ್ಷಿಕ ಭಜನೆ, ರಾತ್ರಿ ೯ಕ್ಕೆ ರಂಗಪೂಜೆ, ಪ್ರಸಾದ ವಿತರಣೆ ನಡೆಯಲಿದೆ.