ಉಡುಪಿ: ಜಿಲ್ಲೆಯಲ್ಲಿ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು ಕಾಪುವಿನ ಮತಗಟ್ಟೆಯಲ್ಲಿ ಮಾತಿನ ಚಕಮಕಿ ನಡೆದಿದೆ. ತಮ್ಮ ಅಭ್ಯರ್ಥಿಗೆ ಮತ ಹಾಕುವಂತೆ ಪ್ರಮುಖ ಪಕ್ಷದ ಕಾರ್ಯಕರ್ತರು ಒತ್ತಾಯ ಹೇರುತ್ತಿದ್ದಾಗ ಮಾತಿನ ಚಕಮಕಿ ನಡೆಯಿತು.
ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಇಲ್ಲಿ ಮತದಾರರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದಾರೆ. ಈ ಸಂದರ್ಭ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.ಈ ವೇಳೆ ಮಧ್ಯಪ್ರವೇಶಿಸಿದ ಕಾಪು ಪೊಲೀಸರು ಎರಡೂ ಪಕ್ಷಗಳ ಕಾರ್ಯಕರ್ತರನ್ನು ಸ್ಥಳದಿಂದ ದೂರ ಕಳುಹಿಸಿದರು. ಇದರಿಂದಾಗಿ ಕೆಲ ಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡಿತು.