ಹಿರಿಯ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್ ನಿಧನ

Share with

ಮಂಗಳೂರು : ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಅವರು ಮಾ.1 ರಂದು ಮುಂಜಾನೆ ನಿಧನರಾಗಿದ್ದಾರೆ.

ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಅವರು ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ ಬಳಿಕ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು ಪ್ರಸ್ತುತ ಸಹಾಯಕ ಸಂಪಾದಕರ ಹುದ್ದೆಯವರೆಗೆ ಸತತ 36 ವರ್ಷಗಳ ಸೇವೆ ಸಲ್ಲಿಸಿ ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

ಕರ್ನಾಟಕ ಕರಾವಳಿ ಇತಿಹಾಸದ ಕುರಿತು 608 ಸಂಶೋಧನ ಲೇಖನಗಳನ್ನು ಬರೆದಿದ್ದ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ರಾಜ್ಯ ಪ್ರಶಸ್ತಿ, ಕೆನರಾ ಬ್ಯಾಂಕ್ ಅಮೃತೋತ್ಸವ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.


Share with

Leave a Reply

Your email address will not be published. Required fields are marked *