ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ ರೈಡ್:‌ ವಿಡಿಯೋ ವೈರಲ್

Share with

ಚಿಕ್ಕಮಗಳೂರು: ಸೋಮವಾರ ನಡೆಯಲಿರುವ ಈದ್ ಮಿಲಾದ್ ಹಬ್ಬದ ಹಿನ್ನೆಲೆ ಮುಸ್ಲಿಂ ಸಮುದಾಯದವರು ನಗರದಲ್ಲಿ ಪ್ರಮುಖ ರಸ್ತೆಗಳನ್ನು ಶೃಂಗರಿಸಿದ್ದು, ಇದೇ ವೇಳೆ ಇಬ್ಬರು ಕಿಡಿಗೇಡಿಗಳು ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿರುವ ವಿಡಿಯೋ ಹರಿದಾಡುತ್ತಿದೆ.

ಚಿಕ್ಕಮಗಳೂರು ನಗರದ ಕಡೂರು – ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಮುಖ್ಯರಸ್ತೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಇಬ್ಬರು ಬೈಕ್ ನಲ್ಲಿ ಸಂಚರಿಸಿದ್ದು, ಇದನ್ನು ಗಮನಿಸಿದ ಯಾರೋ ವಿಡಿಯೋ ಮಾಡಿಕೊಂಡಿದ್ದಾರೆ.

ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದಲ್ಲಿ ರೌಂಡ್ ಹಾಕಿದ ಯುವಕರನ್ನು ಬಂಧಿಸುವಂತೆ ಹಿಂದೂಪರ ಸಂಘಟನೆ ಮುಖಂಡರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಆಗ್ರಹಿಸಿದ್ದಾರೆ.


Share with

Leave a Reply

Your email address will not be published. Required fields are marked *