ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕುಸ್ತಿ ಫೈನಲ್ ಸ್ಪರ್ಧೆಯಿಂದ ವಿನೇಶ್ ಫೋಗಟ್ ಅವರು ಹೆಚ್ಚಿನ ತೂಕ ಹೊಂದಿದ ಹಿನ್ನೆಲೆ ಅನರ್ಹಗೊಂಡಿದ್ದು, ಭಾರತಕ್ಕೆ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಸಿಗುತ್ತದೆ ಎಂಬ ಕನಸು ಕಾಣುತ್ತಿದ್ದ ಕೋಟ್ಯಾಂತರ ಜನರ ಆಸೆ ಈಗ ನುಚ್ಚು ನೂರಾಗಿದೆ.. ಈ ಮೂಲಕ ವಿನೇಶ್ ಫೋಗಟ್ ಅವರಿಗೆ ಒಲಿಂಪಿಕ್ಸ್ನ ಚೊಚ್ಚಲ ಪದಕ ಕೈ ತಪ್ಪಿದೆ.
ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಸೋಲಿಸಿ ವಿನೇಶ್ ಫೋಗಟ್ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಫೈನಲ್ ತಲುಪಿದ್ದರು.
ಆದರೆ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಾಟ್ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್ ಫೈನಲ್ ಪಂದ್ಯದಲ್ಲಿ 100 ಗ್ರಾಂ ಹೆಚ್ಚಿನ ತೂಕ ಹೊಂದಿದ್ದ ಕಾರಣ ಅವರನ್ನು ಅನರ್ಹಗೊಳಿಸಲಾಗಿದೆ. ಈ ವಿಚಾರ ತಿಳಿದು ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಕ್ರಿಯಿಸಿದ್ದು, ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ವಿನೇಶ್ ಫೋಗಾಟ್ ಗೆ ಧೈರ್ಯ ತುಂಬಿದ್ದಾರೆ.
ಮಹಿಳಾ ಕುಸ್ತಿ 50 ಕೆಜಿ ವಿಭಾಗದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಸುದ್ದಿಯನ್ನು ಭಾರತೀಯ ತಂಡವು ವಿಷಾದದಿಂದ ಹಂಚಿಕೊಂಡಿದೆ.