ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮಹಿಳಾ ಕುಸ್ತಿಯ 53 ಕೆಜಿ ವಿಭಾಗದ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ತೂಕ ಪರೀಕ್ಷೆಯಲ್ಲಿ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ನಿಗದಿಗಿಂತ ಹೆಚ್ಚಿನ ತೂಕ ಹೊಂದಿದಕ್ಕಾಗಿ ಫೈನಲ್‌ಗೆ ಅರ್ಹತೆ ಪಡೆದುಕೊಳ್ಳಲು ವಿಫಲರಾಗಿದ್ದರು. ಇದರಿಂದಾಗಿ ಅವರ ಚೊಚ್ಚಲ ಒಲಿಂಪಿಕ್ಸ್ ಚಿನ್ನದ ಪದಕದ ಕನಸು ಕೂಡ ಭಗ್ನವಾಗಿತ್ತು. ಆ ಬಳಿಕ ಕೊಂಚ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಬಳಿಕ ವಿನೇಶ್ ಆವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಪದಕ ಕೈತಪ್ಪಿದ ಹತಾಶೆಯಲ್ಲಿದ್ದ ವಿನೇಶ್ ಕುಸ್ತಿಗೆ ವಿದಾಯವನ್ನು ಘೋಷಿಸಿದ್ದರು. ಆದರೀಗ ಒಲಿಂಪಿಕ್ಸ್ನಿಂದ ಶುಭ ಸುದ್ದಿಯೊಂದು ಹೊರಬಿದ್ದಿದ್ದು, ವಿನೇಶ್ಗೆ ಬೆಳ್ಳಿ ಪದಕ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.