ಅಮ್ಮನಿಗಾಗಿ ಸ್ಮಾರಕ ನಿರ್ಮಿಸಿದ ವಿನೋದ್ ರಾಜ್

Share with

ಅಗಲಿದ ತಾಯಿಗಾಗಿ ನಟ ವಿನೋದ್ ರಾಜ್ ಸ್ಮಾರಕ ನಿರ್ಮಿಸಿದ್ದಾರೆ. ಹೌದು.. ಸೋಲದೇವನಹಳ್ಳಿಯಲ್ಲಿ ನಿರ್ಮಾಣವಾಗಿರುವ ಹಿರಿಯ ನಟಿ ಡಾ.ಲೀಲಾವತಿ ಅವರ ಸ್ಮಾರಕವನ್ನು ಸಚಿವ ಕೆ.ಎಚ್ ಮುನಿಯಪ್ಪ ಉದ್ಘಾಟಿಸಿದ್ದಾರೆ.

ಸ್ಮಾರಕಕ್ಕೆ ‘ತಾಯಿಯೇ ದೇವರು, ವರನಟಿ ಡಾ.ಲೀಲಾವತಿ ದೇಗುಲ’ ಎಂದು ಹೆಸರಿಡಲಾಗಿದೆ. ಲೀಲಾವತಿಯವರ ಬಾಲ್ಯದಿಂದ ಬದುಕಿನ ಕೊನೆ ಕ್ಷಣದವರೆಗೂ ಸವೆಸಿ ಹೋದ ಕಾಲಘಟ್ಟಗಳ 60ಕ್ಕೂ ಹೆಚ್ಚು ಫೋಟೋಗಳನ್ನು ಸ್ಮಾರಕದಲ್ಲಿ ಅಳವಡಿಸಲಾಗಿದೆ ಎಂಬುದು ವಿಶೇಷ.


Share with