ಉಡುಪಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಮಾ.26ರ ಬೆಳಿಗ್ಗೆ 9ರಿಂದ 27ರ ಬೆಳಗ್ಗೆ 9ಗಂಟೆಯವರೆಗೆ ಜಿಲ್ಲೆಯಲ್ಲಿ ಎರಡು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ.
ಎಸ್ಎಸ್ಟಿ ತಂಡವು ಹೆಜಮಾಡಿ ಚೆಕ್ಪೋಸ್ಟ್ನಲ್ಲಿ ದಾಖಲೆಗಳಿಲ್ಲದೇ ಸಾಗಿಸುತಿದ್ದ 85,000 ರೂ.ಗಳನ್ನು ವಶಪಡಿಸಿಕೊಂಡಿದೆ. ಅಬಕಾರಿ ಇಲಾಖೆಯ ವತಿಯಿಂದ 8,210 ರೂ. ಮೌಲ್ಯದ 109 ಲೀ.ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.