ಸುಬ್ರಹ್ಮಣ್ಯ: ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರು ರವಿವಾರ(ಜೂ 29) ಕುಟುಂಬ ಸಮೇತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ನೆರವೇರಿಸಿದರು.

ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ ನಂತರ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ ” ನಾನು ಕಳೆದ ಹತ್ತು ಹದಿನೈದು ವರ್ಷಗಳಿಂದ ಕುಕ್ಕೆ ಕ್ಷೇತ್ರಕ್ಕೆ, ಸ್ವಾಮೀಜಿಗಳ ಬಳಿ ಬರುತ್ತಿದ್ದೇನೆ. ಆಶ್ಲೇಷ ನಕ್ಷತ್ರದ ಈ ಪುಣ್ಯದಿನದಂದು ದೇವರಲ್ಲಿ ತಮಿಳುನಾಡು, ಕರ್ನಾಟಕದ ಮಾತ್ರವಲ್ಲದೆ ಸಮಗ್ರ ಭಾರತದ ಜನರು ಸುಖ ಶಾಂತಿ ನೆಮ್ಮದಿಯಿಂದ ಇರಬೇಕು. ಎಲ್ಲರಿಗೂ ಒಳ್ಳೆಯದಾಗಬೇಕು ಎಂದು ಪ್ರಾರ್ಥನೆ ಮಾಡಿದ್ದೇನೆ” ಎಂದರು.