ವಿಟ್ಲ: ಕೋಳಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಈ ಘಟನೆಯಿಂದ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕೋಳಿಗಳು ರಸ್ತೆಗೆ ಉರುಳಿ ಬಿದ್ದಿದ್ದು, ಅದನ್ನು ಬೇರೆ ವಾಹನಕ್ಕೆ ತುಂಬಿಸಲಾಗಿದೆ ಎಂದು ವರದಿಯಾಗಿದೆ.