ವಿಟ್ಲ: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ್ದ ಕಾರ್ಮಿಕರ ರಕ್ಷಣೆ; ಆಸ್ಪತ್ರೆಗೆ ರವಾನೆ

Share with

ವಿಟ್ಲ: ಗುಡ್ಡ ಜರಿದು ಕಾರ್ಮಿಕರು ಮಣ್ಣಿನ ಅಡಿ ಸಿಲುಕಿದ ಘಟನೆ ಸೂರಿಕುಮೇರು ಸಮೀಪದ ಕಾಯರಡ್ಕ ಎಂಬಲ್ಲಿ ಡಿ.29ರಂದು ನಡೆದಿದೆ.

ಸೂರಿಕುಮೇರು ಸಮೀಪದ ಕಾಯರಡ್ಕ ಎಂಬಲ್ಲಿ ಗುಡ್ಡ ಕುಸಿತ

ಜೆಸಿಂತಾ ಮಾರ್ಟಿಸ್ ಎಂಬವರ ಮನೆಯ ಕಾಂಪೌಂಡ್ ನ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಮೇಲಿನ‌ಗುಡ್ಡ ಜರಿದು ಬಿದ್ದಿದೆ. ಗುಡ್ಡ ಜರಿದು ಮಣ್ಣಿನೊಳಗೆ ಸಿಲುಕಿಕೊಂಡಿದ್ದ ಇಬ್ಬರು ಕಾರ್ಮಿಕರಾದ ರಾಜೇಶ್ ನಾಯ್ಕ್ ಬಾಯಿಲ, ಉಮೇಶ್ ನಾಯ್ಕ್ ನೆಲ್ಲಿ ರವರು ಮಣ್ಣಿನ ಅಡಿಯಲ್ಲಿ ಸಿಲುಕಿಹಾಕಿಕೊಂಡಿದ್ದರು.

ಕಾಂಪೌಂಡ್ ನಿರ್ಮಾಣಕ್ಕೆ ಮಣ್ಣು ಅಗೆದು ಪಾಯ ಮಾಡುತ್ತಿದ್ದ ವೇಳೆ ಗುಡ್ಡ ಜರಿದು ಘಟನೆ ಸಂಭವಿಸಿದೆ. ತಕ್ಷಣ ಮಣ್ಣಿನ ಅಡಿಯಲ್ಲಿ ಸಿಲುಕಿದ ಕಾರ್ಮಿಕರನ್ನು ರಕ್ಷಣೆ ಮಾಡಿದ ಸ್ಥಳೀಯರು, ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಹೆಚ್ ಈ ಹಾಗೂ ಕಂದಾಯ ಅಧಿಕಾರಿ ವಿಜಯ್ ರವರು ಸ್ಥಳಕ್ಕೆ ಬೇಟಿ ನೀಡಿದ್ದಾರೆ.


Share with

Leave a Reply

Your email address will not be published. Required fields are marked *