ವಿಟ್ಲ: ಅಡಿಕೆ ಮರ ಮುರಿದು ಬಿದ್ದು ಮಹಿಳೆ ಸಾವು

Share with

ವಿಟ್ಲ: ಮಹಿಳೆಯೋರ್ವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಮುರಿದು ಬಿದ್ದು ಸಾವನ್ನಪ್ಪಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗುಲಾಬಿ(48) ಎಂದು ಗುರುತಿಸಲಾಗಿದೆ.

ಮಹಿಳೆಯೋರ್ವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಮುರಿದು ಬಿದ್ದು ಸಾವನ್ನಪ್ಪಿದ್ದಾರೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಮುರಿದು ಬಿದ್ದು ತಲೆಗೆ ತೀವ್ರ ಪೆಟ್ಟಾಗಿದ್ದು, ಕೂಡಲೇ ಮಹಿಳೆಯನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.


Share with

Leave a Reply

Your email address will not be published. Required fields are marked *